alex Certify BIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದು ನನ್ನ ಸ್ವಂತ ನಿರ್ಧಾರ; ಯಡಿಯೂರಪ್ಪ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದು ನನ್ನ ಸ್ವಂತ ನಿರ್ಧಾರ; ಯಡಿಯೂರಪ್ಪ ಸ್ಪಷ್ಟನೆ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದು ನನ್ನ ಸ್ವಂತ ನಿರ್ಧಾರ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಲಿಂಗಾಯಿತರಿಗೆ ಬಿಜೆಪಿಯಿಂದ ಅವಮಾನವಾಗಿದೆ, ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ, ಕಣ್ಣೀರು ಹಾಕಿಸಿದ್ರು ಎಂಬ ಕಾಂಗ್ರೆಸ್ ಆರೋಪ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮಾತನಾಡಿದ ಯಡಿಯೂರಪ್ಪ, ರಾಜೀನಾಮೆ ನೀಡಿದ್ದು ನನ್ನ ಸ್ವಂತ ನಿರ್ಧಾರ. ಬೇರೆಯವರಿಗೆ ಅವಕಾಶ ಸಿಗಲಿ ಎಂಬ ಕಾರಣಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದರು.

ಬಿಜೆಪಿ ಯಾರಿಗೂ ಅವಮಾನ ಮಾಡಿಲ್ಲ, ಎಲ್ಲರಿಗೂ ಉತ್ತಮ ಸ್ಥಾನಮಾನ ನೀಡಿ ಒಳ್ಳೆಯ ರೀತಿ ನಡೆಸಿಕೊಂಡಿದೆ. ಕಾಂಗ್ರೆಸ್ ನವರು ರಾಜಕೀಯ ದುರುದ್ದೇಶಕ್ಕೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...