ಬೆಂಗಳೂರು: ಇನ್ನೂ ಎರಡು ವರ್ಷಗಳ ಕಾಲ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದಿರುವ ಸಿಎಂ ಯಡಿಯೂರಪ್ಪನವರ ಹೇಳಿಕೆಯಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕನಾಗಿ ಸ್ಪಷ್ಟವಾಗಿ ತಿಳಿಸಬೇಕಾಗಿದ್ದನ್ನು ಸಿಎಂ ಬಿ ಎಸ್ ವೈ ತಿಳಿಸಿದ್ದಾರೆ. ಪಕ್ಷ, ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಅದಕ್ಕೆ ನಾವೆಲ್ಲರೂ ಬದ್ಧರು ಹೊರತು ಅದರ ಹೊರತಾಗಿ ಯಾರೂ ಇಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂಬ ಸಂದೇಶ ರವಾನಿಸಿದ್ದಾರೆ. ಓರ್ವ ಕಾರ್ಯಕರ್ತನಾಗಿ, ನಾಯಕನಾಗಿ ಸಿಎಂ ಯಡಿಯೂರಪ್ಪ ಮಾದರಿ. ಇಲ್ಲಿ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಈ ಬಗ್ಗೆ ವರಿಷ್ಠರೂ ಸ್ಪಷ್ಟ ಪಡಿಸಿದ್ದಾರೆ ಎಂದು ತಿಳಿಸಿದರು.
ಇನ್ನು ರಾಜ್ಯಕ್ಕೆ ಅರುಣ್ ಸಿಂಗ್ ಆಗಮನ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಅರುಣ್ ಸಿಂಗ್ ರಾಜ್ಯ ಬಿಜೆಪಿ ಉಸ್ತುವಾರಿ ಆದ್ದರಿಂದ ಆಗಾಗ ರಾಜ್ಯಕ್ಕೆ ಭೇಟಿ ನೀಡುವುದು, ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಿಸುವುದು ಸಹಜ. ಅದರಂತೆಯೇ ಜೂನ್ 16ಕ್ಕೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು.