alex Certify BIG NEWS: ಸಿಎಂ ಹೇಳಿದ್ದೇ ತಡ BJP ಶಾಸಕರ ಜೊಲ್ಲು ಸುರಿಯಲು ಆರಂಭವಾಗಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಹೇಳಿದ್ದೇ ತಡ BJP ಶಾಸಕರ ಜೊಲ್ಲು ಸುರಿಯಲು ಆರಂಭವಾಗಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ 5000 ಕೋಟಿ ಅನುದಾನ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಕರ್ನಾಟಕ ರಾಜ್ಯದ ಆರ್ಥಿಕ ಸ್ಥಿತಿ ಕುಸಿದಿದೆ. ನಾವು ಈಗಾಗಲೇ ಸಾಲ ಮಾಡಿ ತುಪ್ಪ ತಿನ್ನುತ್ತಿದ್ದೇವೆ. ಅಂತದ್ದರಲ್ಲಿ 5000 ಕೋಟಿ ಅನುದಾನ ಎಂದು ಹೇಳಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಕಲಬುರ್ಗಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸಿಎಂ 5000 ಕೋಟಿ ಕೊಡುತ್ತೇವೆ ಎಂದು ಹೇಳುತ್ತಿದ್ದಂತೆ ಬಿಜೆಪಿ ಶಾಸಕರಿಗೆ ಜೊಲ್ಲು ಸುರಿಯಲು ಆರಂಭವಾಗಿದೆ. 40% ಕಮಿಷನ್ ಹೊಡೆಯಬಹುದಲ್ಲ ಎಂಬ ಜೊಲ್ಲು ಸುರಿಯಲು ಶುರುವಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಯಾರೋ ಕೊಟ್ಟ ಉದ್ರಿ ಭಾಷಣವನ್ನು ಮಾಡಿ ಸಿಎಂ ಹೋಗಿದ್ದಾರೆ. ನಿನ್ನೆ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿಗಳು ಮಾಡಿದ ಭಾಷಣ ಯಾರೋ ಬರೆದು ಕೊಟ್ಟಿದ್ದು ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ವಾಗ್ದಾಳಿ ನಡೆಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...