ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಡಿ ಸಮರ ಜೋರಾಗಿದ್ದು, ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.
ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು ಹಿಡಿದಿರುವ ರಮೇಶ್ ಜಾರಕಿಹೊಳಿ, ಈಗಾಗಲೇ ಎರಡು ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದು, ಸಿಡಿ ಪ್ರಕರಣ ದೆಹಲಿ ಅಂಗಳಕ್ಕೆ ಕೊಂಡೊಯ್ದಿದ್ದಾರೆ.
ಇಂದು ಸಂಜೆ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದು, ಈ ವೇಳೆ ಸಿಡಿ ಕೇಸ್ ನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.