ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾಳೆ.
ಉದ್ಯೋಗಿಗಳಿಗೆ ಖುಷಿ ಸುದ್ದಿ….! ಶೀಘ್ರವೇ ಹೆಚ್ಚಾಗಲಿದೆ ಪಿಎಫ್ ಹಣ
ಸಿಡಿ ಕೇಸ್ ನಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿಯನ್ನು ರದ್ದು ಪಡಿಸಬೇಕು ಎಂದು ಯುವತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ತನಿಖೆಗೆ ಹೊಸ ತಂಡ ರಚಿಸುವಂತೆ ಮನವಿ ಮಾಡಿದ್ದಾಳೆ. ಅಲ್ಲದೇ ಈವರೆಗಿನ ಎಸ್ಐಟಿ ತನಿಖೆ ಪರಿಗಣಿಸದಂತೆಯೂ ತಿಳಿಸಿದ್ದಾಳೆ.
ಕೊರೊನಾ ಸಂಕಷ್ಟದ ಮಧ್ಯೆ ಭರ್ಜರಿ ಗುಡ್ ನ್ಯೂಸ್: ಚೇತರಿಕೆ ದರ ಶೇ. 94.29 ಕ್ಕೆ ಏರಿಕೆ
ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದು, ಗೃಹ ಸಚಿವರ ನಿಕಟ ಸಂಪರ್ಕದಲ್ಲಿದ್ದಾರೆ. ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ರಜೆಯ ಮೇಲಿದ್ದು ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ದೂರಿದ್ದಾಳೆ. ಈ ಹಿನ್ನೆಲೆಯಲ್ಲಿ ನ್ಯಾ.ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಿಂದ ಎಸ್ಐಟಿ, ಸರ್ಕಾರ, ಹಾಗೂ ಪೊಲೀಸ್ ಆಯುಕ್ತರಿಗೆ ಇದೀಗ ನೊಟೀಸ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.