ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ಎಸ್ ಐ ಟಿಗೆ ಅಂತಿಮ ತನಿಖಾ ವರದಿ ಸಲ್ಲಿಸಲು ಅನುಮತಿ ನೀಡಿದೆ.
ಪ್ರಕರಣದ ತನಿಖೆ ನಡೆಸಿದ್ದ ಎಸ್ ಐ ಟಿ, ಅಂತಿಮ ವರದಿ ಸಲ್ಲಿಸಲು ಅನುಮತಿ ಕೋರಿತ್ತು. ಈ ಹಿನ್ನೆಲೆಯಲ್ಲಿ ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸಧ್ಯದಲ್ಲಿಯೇ ರಮೇಶ್ ಜಾರಕಿಹೊಳಿ ಭವಿಷ್ಯ ನಿರ್ಧಾರವಾಗಲಿದೆ.
ಕನ್ನಡದ ಖ್ಯಾತ ಧಾರಾವಾಹಿ ನಿರ್ದೇಶಕನಿಗೆ ಲಕ್ಷಾಂತರ ರೂ. ವಂಚನೆ…!
ಒಂದು ವೇಳೆ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಆರೋಪ ಸಾಬೀತಾಗದೇ ಇದ್ದರೆ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತದೆ. ಆಗ ರಮೇಶ್ ಜಾರಕಿಹೊಳಿ ಆರೋಪಮುಕ್ತ ಎಂಬ ತೀರ್ಪು ಬರುವ ಸಾಧ್ಯತೆ ಇದೆ. ಒಂದೊಮ್ಮೆ ಚಾರ್ಜ್ ಶೀಟ್ ಸಲ್ಲಿಕೆಯಾದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಲಿದೆ. ಈ ನಿಟ್ಟಿನಲ್ಲಿ ಎಸ್ ಐ ಟಿ ಸಲ್ಲಿಸಿದ ಅಂತಿಮ ವರದಿ ಕುತೂಹಲ ಮೂಡಿಸಿದೆ.