ಗುರುವಾರಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿ ಪ್ರವಾಸದಲ್ಲಿದ್ದ ವೇಳೆ ಅವರ ಕಾರಿನ ಮೇಲೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಇದು ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಲು ಕಾರಣವಾಗಿತ್ತಲ್ಲದೆ ಪೊಲೀಸ್ ವೈಫಲ್ಯವೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿತ್ತು.
ಇದರ ಮಧ್ಯೆ ಇಂದು ಸಿದ್ದರಾಮಯ್ಯ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಇಲ್ಲಿ ಕೂಡ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಪೊಲೀಸ್ ಭದ್ರತೆಯ ನಡುವೆಯೂ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲಾಗಿದೆ.
ವೀರ ಸಾವರ್ಕರ್ ಕುರಿತು ಸಿದ್ದರಾಮಯ್ಯ ಇಲ್ಲಸಲ್ಲದ ಹೇಳಿಕೆ ನೀಡಿದ್ದು, ಅವರು ಈ ಪುಣ್ಯಭೂಮಿಗೆ ಕಾಲಿಡುವುದು ಬೇಡ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಹೇಳಿದರು. ಬಳಿಕ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡರು.