ಬೆಂಗಳೂರು: ವಿಪಕ್ಷ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿರುವ ರಾಜ್ಯ ಬಿಜೆಪಿ, ಮೀಸಲಾತಿ ಹೆಚ್ಚಳ ಘೋಷಣೆ ಮಾಡಿರುವುದು ಕಾಂಗ್ರೆಸ್ ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದೆ.
ಬಿಜೆಪಿ ಸರ್ಕಾರ ಪರಿಶಿಷ್ಟ ವರ್ಗದ ಮೀಸಲಾತಿಯನ್ನು ಹೆಚ್ಚಳ ಮಾಡಿದ್ದೇ ತಡ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ನಾಯಕರಿಗೆ ಬೆವರಿಳಿಯತೊಡಗಿದೆ ಎಂದು ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ಅವರೇ, ತಾವು ಓಟ್ ಬ್ಯಾಂಕ್ ಆಗಿ ಬಳಸಿದ್ದ ದಲಿತ ಸಮುದಾಯ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವುದು ಸಹಿಸಿಕೊಳ್ಳಲಾಗುತ್ತಿಲ್ಲವೇ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.