ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಲು ಹೆಚ್. ವಿಶ್ವನಾಥ್ ಭೇಟಿ ನೀಡಿದ್ದರು ಎಂದು ಹೇಳಲಾಗುತ್ತಿದ್ದರೂ ಸಹ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.
ವಿಧಾನಸಭಾ ಚುನಾವಣೆ ವೇಳೆಗೆ ಹೆಚ್. ವಿಶ್ವನಾಥ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ಜೊತೆಗಿನ ಅವರ ಭೇಟಿ ಕುತೂಹಲ ಕೆರಳಿಸಿದೆ.