ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು.
ಈ ಘಟನೆಯನ್ನು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೊದಲಾದವರು ಖಂಡಿಸಿದ್ದರು.
ಇದರ ಮಧ್ಯೆ ಕರ್ನಾಟಕ ಕಾಂಗ್ರೆಸ್, ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದೆ.
ಅಲ್ಲದೇ, ಬಿಜೆಪಿಯವರು ಸಿದ್ದರಾಮಯ್ಯನವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ ಎಂದು ಕಟುವಾಗಿ ಟೀಕಿಸಿದೆ.