ಮಡಿಕೇರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗಡಿಪಾರು ಮಾಡಲು ಮುಂದಾಗಿದ್ದ ಪೊಲೀಸರ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ಆರೋಪಿಗಳ ಗಡಿಪಾರು ಮಾಡಲು ಪೊಲೀಸ್ ಇಲಾಖೆಯು ಉಪವಿಭಾಗಾಧಿಕಾರಿ ನ್ಯಾಯಾಲಯಕ್ಕೆ ಶಿಫಾರಸು ಮಾಡಿರುವುದನ್ನು ಖಂಡಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾವಣೆಗೊಂಡಿರುವ ನೂರಾರು ಕಾರ್ಯಕರ್ತರು ಗಡಿಪಾರು ನೋಟೀಸ್ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
ಮಡಿಕೇರಿಗೆ ಆಗಮಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಕವನ್ ಕಾವೇರಪ್ಪ, ವಿನಯ್ ಎಂಬುವವರ ಗಡಿಪಾರಿಗೆ ಪೊಲೀಸ್ ಇಲಾಖೆ ಶಿಫಾರಸು ಮಾಡಿದೆ.