ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ ಕ್ಯಾನ್ಸರ್ ವ್ಯಾಪಿಸಿದೆ. ಕ್ಯಾನ್ಸರ್ ವ್ಯಾಪಿಸಿದ ಮೇಲೆ ಚಿಕಿತ್ಸೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಸೋಲು, ಸಿ.ಎಂ.ಇಬ್ರಾಹಿಂ ಪಕ್ಷ ತೊರೆದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಕಾಂಗ್ರೆಸ್ ಪಕ್ಷಕ್ಕೆ ಕ್ಯಾನ್ಸರ್ ಬಂದಿದೆ. ಕ್ಯಾನ್ಸರ್ ವ್ಯಾಪಿಸಿದ ಮೇಲೆ ಇಡೀ ದೇಹವನ್ನು ತಿನ್ನುತ್ತದೆ. ಹಾಗಾಗಿ ಕಾಂಗ್ರೆಸ್ ಗೆ ಉಳಿಗಾಲವಿಲ್ಲ ಎಂದರು.
ನೀತಿ ಹೀನವಾದ ಕಾಂಗ್ರೆಸ್ ನ್ನು ಜನ ಹೇಗೆ ನಂಬುತ್ತಾರೆ? ಕಾಂಗ್ರೆಸ್ ಪಕ್ಷದಲ್ಲಿ ಯಾರು ಉಳಿಯುತ್ತಾರೆ? ಸ್ವತಃ ಸಿದ್ದರಾಮಯ್ಯನವರೇ ಕಾಂಗ್ರೆಸ್ ಬಿಟ್ಟರೂ ಆಶ್ಚರ್ಯವಿಲ್ಲ ಎಂದು ಹೇಳಿದರು.