ಮುಂದಿನ ಸಿಎಂ ಯಾರಾಗಬೇಕೆಂಬ ಚರ್ಚೆ ಕಾಂಗ್ರೆಸ್ ನಲ್ಲಿ ನಡೆದಿರುವ ಮಧ್ಯೆ ಪ್ರಬಲ ಆಕಾಂಕ್ಷಿಯಾಗಿರುವ ಸಿದ್ದರಾಮಯ್ಯನವರ ನಿವಾಸಕ್ಕೆ ಅವರ ಆಪ್ತ ಶಾಸಕರುಗಳು ಒಬ್ಬೊಬ್ಬರಾಗಿ ಭೇಟಿ ನೀಡುತ್ತಿದ್ದು, ಮುಂದಿನ ತಂತ್ರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಹೈಕಮಾಂಡ್ ಕರೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಇಂದು ಶಾಸಕ ಜಮೀರ್ ಅಹ್ಮದ್ ಅವರೊಂದಿಗೆ ದೆಹಲಿಗೆ ತೆರಳುತ್ತಿದ್ದು, ಸಿದ್ದರಾಮಯ್ಯನವರ ನಿವಾಸಕ್ಕೆ ಶಾಸಕರುಗಳಾದ ರಾಜಣ್ಣ, ಶಿವಲಿಂಗೇಗೌಡ, ಹೆಚ್.ಸಿ. ಮಹದೇವಪ್ಪ ಮೊದಲಾದವರು ಭೇಟಿ ನೀಡಿದ್ದಾರೆ.
ಸಿದ್ದರಾಮಯ್ಯನವರು ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಬಹುತೇಕ ಶಾಸಕರು ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತಷ್ಟು ಬಲ ಗಳಿಸಬಹುದು ಎಂಬುದು ಈ ಶಾಸಕರುಗಳ ನಿರೀಕ್ಷೆಯಾಗಿದೆ.