alex Certify BIG NEWS: ಸಿದ್ದರಾಮಯ್ಯ ಬಯಸಿದಂತೆ ರಾಜಕಾರಣ ಮಾಡೋಕಾಗಲ್ಲ; ತಿರುಗೇಟು ನೀಡಿದ ಸಚಿವ ಕಾರಜೋಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಬಯಸಿದಂತೆ ರಾಜಕಾರಣ ಮಾಡೋಕಾಗಲ್ಲ; ತಿರುಗೇಟು ನೀಡಿದ ಸಚಿವ ಕಾರಜೋಳ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಹೇಳಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ಸಭೆ ಕರೆಯದೇ ಚುನಾವಣಾ ರಾಜಕಾರಣ ಮಾಡುತ್ತಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ, ಯಾವಗ ಸರ್ವಪಕ್ಷ ಸಭೆ ಕರೆಯಬೇಕು ಎಂಬುದು ನಮಗೂ ಗೊತ್ತು. ಸರ್ವ ಪಕ್ಷ ಸಭೆ ಕರೆಯುವ ಸಂದರ್ಭ ಬಂದಿಲ್ಲ ಅದಕ್ಕೆ ಕರೆದಿಲ್ಲ. ಸಿದ್ದರಾಮಯ್ಯ ಬಯಸಿದಂತೆ ರಾಜಕಾರಣ ಮಾಡೋಕಾಗಲ್ಲ ಎಂದು ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ನಾಯಕರು ನಾಟಕಮಾಡುತ್ತಿದ್ದಾರೆ. ಅವರು ನಾಟಕ ಮಾಡಿದರೆ ನಾವು ಪಾತ್ರಧಾರಿಗಳಾಗಬೇಕಿಲ್ಲ. ಗಡಿ ವಿಚಾರದಲ್ಲಿ ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...