alex Certify BIG NEWS: ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಭೇಟಿಯಾದ ಹೆಚ್.ವಿಶ್ವನಾಥ್; ಕುತೂಹಲ ಮೂಡಿಸಿದ ಹಳ್ಳಿಹಕ್ಕಿ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಭೇಟಿಯಾದ ಹೆಚ್.ವಿಶ್ವನಾಥ್; ಕುತೂಹಲ ಮೂಡಿಸಿದ ಹಳ್ಳಿಹಕ್ಕಿ ನಡೆ

ಬೆಂಗಳೂರು: ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ತೆರಳಿದ ಹೆಚ್.ವಿಶ್ವನಾಥ್, ಡಿಕೆಶಿ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ವಿಶ್ವನಾಥ್ ಜೊತೆ ನಮ್ಮ ಅನುಬಂಧ 30 ವರ್ಷಗಳದ್ದು ಎಂದಿದ್ದಾರೆ.

ಮೊನ್ನೆಯಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದ ಹೆಚ್.ವಿಶ್ವನಾಥ್, ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದರು. ಇತ್ತೀಚೆಗೆ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ವಿಶ್ವನಾಥ್, ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...