ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಅವರು ಮತ್ತೆ ಸಿಎಂ ಆಗುವುದು ಕೇವಲ ಕನಸು ಎಂದು ವರುಣಾ ಬಿಜೆಪಿ ಅಭ್ಯರ್ಥಿ, ಸಚಿವ ವಿ ಸೋಮಣ್ಣ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸೋಮಣ್ಣ, ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲ್ಲ. ಸಿದ್ದರಾಮಯ್ಯ ಓಲೈಕೆಗಾಗಿ ಎಂ.ಬಿ. ಪಾಟೀಲ್ ಹೇಳಿಕೆ ಕೊಡುತ್ತಿದ್ದಾರೆ ಎಂದಿದ್ದಾರೆ.
ವರುಣಾದಲ್ಲಿ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಪ್ರಚಾರ ವಿಚಾರವಾಗಿ ಮಾತನಾಡಿದ ಸಚಿವ ಸೋಮಣ್ಣ, ಶಿವರಾಜ್ ಕುಮಾರ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಸಿದ್ದರಾಮಯ್ಯನವರಿಗೆ ಸೋಲಿನ ಭೀತಿ ಅನ್ನುವುದಕ್ಕಿಂತ ವರುಣಾ ಕ್ಷೇತ್ರದಲ್ಲಿ ಜನರಿಗೆ ಏನೂ ಮಾಡಿಲ್ಲ. ಅದಕ್ಕಾಗಿ ದುನಿಯಾ ವಿಜಿ, ರಮ್ಯಾ, ಲೂಸ್ ಮಾದ ಮೊದಲಾದವ ಸ್ಟಾರ‍್ ಗಳನ್ನು ಕರೆತಂದು ಪ್ರಚಾರ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.