alex Certify BIG NEWS: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ; ಕೋಲಾರದಿಂದಲೇ ಸ್ಪರ್ಧಿಸುವಂತೆ ಪಟ್ಟು; ಬಾರುಕೋಲಿನಿಂದ ಹೊಡೆದುಕೊಂಡು ಶಕ್ತಿ ಪ್ರದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ; ಕೋಲಾರದಿಂದಲೇ ಸ್ಪರ್ಧಿಸುವಂತೆ ಪಟ್ಟು; ಬಾರುಕೋಲಿನಿಂದ ಹೊಡೆದುಕೊಂಡು ಶಕ್ತಿ ಪ್ರದರ್ಶನ

ಬೆಂಗಳೂರು: ಕೋಲಾರ ಕ್ಷೇತ್ರದಿಂದಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೋಲಾರ ಭಾಗದ ಸಿದ್ದರಾಮಯ್ಯ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ಕೋಲಾರದಿಂದ ಬೆಂಗಳೂರಿಗೆ ಆಗಮಿಸಿರುವ ಸಿದ್ದರಾಮಯ್ಯ ಅಭಿಮಾನಿಗಳು, ಬೆಂಬಲಿಗರು ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಎದುರು ಧರಣಿ ನಡೆಸಿದ್ದು, ಸಿದ್ದರಾಮಣ್ಣ ಕೋಲಾರಕ್ಕೆ ಬರಲೇ ಬೇಕು, ನಿಮ್ಮನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದು ಘೋಷಣೆಗಳನ್ನು ಕೂಗಿದ್ದಾರೆ.

ಅಲ್ಲದೇ ಬಾರುಕೋಲು ಹಿಡಿದುಕೊಂಡು ಒಬ್ಬರಿಗೊಬ್ಬರು ಹೊಡೆದುಕೊಂಡು ಶಕ್ತಿ ಪ್ರದರ್ಶಿಸಿರುವ ಸಿದ್ದರಾಮಯ್ಯ ಬೆಂಬಲಿಗರು, ಸಿದ್ದರಾಮಯ್ಯ ಕೋಲಾರಕ್ಕೆ ಬರಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೇ ಕೋಲಾರ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ತಬ್ಬಿಬ್ಬಾದ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...