ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಿಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ನಡೆದಿದೆ.
ಶಾಸಕ ರಾಮಪ್ಪ ಪುತ್ರಿ ವಿವಾಹ ಸಮಾರಂಭದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದು, ಈ ವೇಳೆ ಕಲ್ಯಾಣ ಮಂಟಪದ ಬಳಿ ಕಾರ್ಯಕರ್ತರು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿ, ಜೈಕಾರ ಹಾಕಿದ್ದಾರೆ. ಮುಂದಿನ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದ್ದರೂ ಕೂಡ ಕ್ಯಾರೇ ಎನ್ನದ ಕೈ ಕಾರ್ಯಕರ್ತರು ಸಿದ್ದರಾಮಯ್ಯ ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.
ಇನ್ನು ಶಾಸಕ ರಾಮಪ್ಪ ಪುತ್ರಿ ಮದುವೆ ಸಮಾರಂಭದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿರುವ ಜನಪ್ರತಿನಿಧಿಗಳು ನೂರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.