BIG NEWS: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿರುವ ಬೆನ್ನಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ತೀವ್ರ ಕುತೂಹಲ

File:Vidhana Soudha, front (01).jpg - Wikimedia Commons

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ಜೊತೆಗೆ ಸಚಿವ ಸಂಪುಟ ಕೂಡ ರಚನೆಯಾಗಲಿದೆ ಎನ್ನಲಾಗಿದ್ದು, ಹಲವರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆ ಇದೆ.

ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದ ಆಡಳಿತರೂಢ ಬಿಜೆಪಿ, ಈಗ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಬೇಕಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಈಗ ಎಲ್ಲರಲ್ಲೂ ಮನೆ ಮಾಡಿದೆ. ಅದರಲ್ಲೂ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಹಳ ಎಚ್ಚರಿಕೆಯಿಂದ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಬಹುಮತ ಬಂದರೆ ಮುಂದೆಯೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದರು. ಹೀಗಾಗಿ ಲಿಂಗಾಯತ ಸಮುದಾಯದ ಬೊಮ್ಮಾಯಿ ಅವರನ್ನೇ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಿದ್ದಾರಾ ಎಂಬ ಪ್ರಶ್ನೆ ಮೂಡಿದೆ.

ಒಂದೊಮ್ಮೆ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡುವ ಪ್ರಶ್ನೆ ಬಂದರೆ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿದ್ದು, ಆಗ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಂಗಾಯಿತ ಸಮುದಾಯದವರು ಆಯ್ಕೆಯಾಗುವ ನಿರೀಕ್ಷೆ ಇದೆ. ಬೊಮ್ಮಾಯಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕರಾದರೆ, ಹಿಂದುಳಿದ ವರ್ಗಕ್ಕೆ ಸೇರಿದ ಸುನಿಲ್ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read