BIG NEWS: ಸಿದ್ದರಾಮಯ್ಯ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ; ವರುಣಾದಲ್ಲಿ ಬಿಜೆಪಿ ಗೆದ್ದರೆ ಮಾದರಿ ಕ್ಷೇತ್ರ ಮಾಡುವುದಾಗಿ ಭರವಸೆ

ಮೈಸೂರು: ಕರ್ನಾಟಕವನ್ನು ಅಭಿವೃದ್ದಿ ಹಾಗೂ ಸುರಕ್ಷಿತ ರಾಜ್ಯ ಮಾಡುವ ಏಕೈಕ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ.

ಮೈಸೂರಿನ ವರುಣಾದಲ್ಲಿ ಸಚಿವ ವಿ. ಸೋಮಣ್ಣ ಪರ ಚುನಾವಣಾ ಪ್ರಚಾರ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ರಾಜ್ಯವನ್ನು ದೆಹಲಿ ಎಟಿಎಂ ಮಾಡಲು ಹೊರಟಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಪಿ ಎಫ್ ಐ ನಿಷೇಧ ಹಿಂಪಡೆಯುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಲಿಂಗಾಯಿತರು ಭ್ರಷ್ಟಾಚಾರಿಗಳು ಎಂದು ಹೇಳುವ ಮೂಲಕ ಲಿಂಗಾಯಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ವೀರೇಂದ್ರ ಪಾಟೀಲ್, ನಿಜಲಿಂಗಪ್ಪನವರಿಗೆ ಅವಮಾನ ಮಾಡಿತ್ತು. ಅಧಿಕಾರದಿಂದ ಕೆಳಗಿಳಿಸಿದ್ದರು ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ಮಂಡ್ಯ ಮೈಶುಗರ್ ಕಾರ್ಖಾನೆ ಮುಚ್ಚಲಾಯಿತು. ಈಗ ಸಿದ್ದರಾಮಯ್ಯ ಮತ್ತೆ ಕ್ಷೇತ್ರ ಬದಲಾವಣೆ ಮಾಡಿದ್ದಾರೆ. ಪದೇ ಪದೇ ಯಾಕೆ ಕ್ಷೇತ್ರ ಬದಲಾವಣೆ ಮಾಡುತ್ತೀರಾ? ವರುಣಾ ಮತದಾರರೇ ನಿಮಗೆ ನಿವೃತ್ತಿ ಹೊಂದುವ ನಾಯಕ ಬೇಕಾ? ಅಥವಾ ಅಭಿವೃದ್ಧಿ ಮಾಡುವ ವಿ. ಸೋಮಣ್ಣ ಬೇಕಾ ಎಂಬುದನ್ನು ನೀವೇ ತೀರ್ಮಾನ ಮಾಡಿ ಎಂದರು.

ವರುಣಾದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದರೆ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವಂತೆ ಕರೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read