alex Certify BIG NEWS: ಸಿದ್ದರಾಮಯ್ಯ ವಿರುದ್ಧ ಗೋಬ್ಯಾಕ್ ಅಭಿಯಾನ; ಬಿಜೆಪಿ ಯುವ ಮೋರ್ಚಾದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ವಿರುದ್ಧ ಗೋಬ್ಯಾಕ್ ಅಭಿಯಾನ; ಬಿಜೆಪಿ ಯುವ ಮೋರ್ಚಾದಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

ಮಡಿಕೇರಿ: ಕೊಡಗು ಜಿಲ್ಲಾ ಭೇಟಿಗೆ ಆಗಮಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಸಿದ್ದು ಗೋಬ್ಯಾಕ್ ಪೋಸ್ಟರ್ ಪ್ರದರ್ಶಿಸಲಾಗಿದೆ.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿಗೆ ಗೋಬ್ಯಾಕ್ ಪೋಸ್ಟರ್ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ತಿತಿಮತಿ ಗ್ರಾಮಕ್ಕೆ ಭೇಟಿ ನೀಡಿದ್ದು, ಈ ವೇಳೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ನಿಯತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...