ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ರ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಅನಿಲ್ ಲಾಡ್ ವಿರುದ್ಧ ಹೈಗ್ರೌಂಡ್ರ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಹಾಗೂ ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಅನಿಲ್ ಲಾಡ್ ಸಾಮಾಜಿಕ ಜಾಲತಾಣಗಳಲ್ಲಿ ನೀಡಿದ್ದ ಹೇಳಿಕೆ ವಿರುದ್ಧ ಇದೀಗ ಬಿಜೆಪಿ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.