alex Certify BIG NEWS: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ BJP ಮುಖಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ BJP ಮುಖಂಡ

ಬೆಂಗಳೂರು: ಸಾಲದ ರೀತಿಯಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಸಾಲದ ರೂಪದಲ್ಲಿ 1.30 ಕೋಟಿ ರೂಪಾಯಿಯನ್ನು ಸಿದ್ದರಾಮಯ್ಯ ಲಂಚವಾಗಿ ಪಡೆದುಕೊಂಡಿದ್ದಾರೆ. ಕಿಂಗ್ಸ್ ಕೋರ್ಟ್ ನ ಎಲ್ ವಿವೇಕಾನಂದ ಎಂಬುವವರಿಂದ ಚೆಕ್ ರೂಪದಲ್ಲಿ ಹಣ ಪಡೆದು ಬಳಿಕ ಅವರನ್ನು ಟರ್ಫ್ ಕ್ಲಬ್ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದರು ಎಂದು ಸಿದ್ದರಾಮಯ್ಯ ವಿರುದ್ಧ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಲೋಕಾಯುಕ್ತದಲ್ಲಿ ರಮೇಶ್ ದೂರು ದಾಖಲಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...