BIG NEWS: ಸಿದ್ದರಾಮಯ್ಯ ಸರ್ಕಾರದಿಂದ `ಬಿಜೆಪಿ’ಗೆ ಬಿಗ್ ಶಾಕ್; 40 ಪರ್ಸೆಂಟ್ ಸೇರಿ ಹಲವು ಅಕ್ರಮಗಳ ತನಿಖೆ

ವಿಜಯಪುರ : ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರ (Congress government) ಬಿಜೆಪಿಗೆ (BJP) ಮತ್ತೊಂದು ಬಿಗ್ ಶಾಕ್ ನೀಡಿದ್ದು, ಶೀಘ್ರವೇ ಹಿಂದಿನ ಬಿಜೆಪಿ ಸರ್ಕಾರದಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಾದ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ. ಕೈಗಾರಿಕಾ ಕ್ಷೇತ್ರದಿಂದ ಹಿಡಿದು ಎಲ್ಲಾ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲೂ ಸೂಚನೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರವು ಎಲ್ಲಾ ಜಾತಿ, ಧರ್ಮಗಳಿಗೆ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಕೊರೊನಾ ಸಂದರ್ಭದ ಹಗರಣ, 40 ಪರ್ಸೆಂಟ್ ಕಮೀಷನ್ ಆರೋಪ, ನೀರಾವರಿ ಇಲಾಖೆ ಅಕ್ರಮ ಸೇರಿ ಎಲ್ಲವನ್ನೂ ತನಿಖೆ ಮಾಡಿಸುತ್ತೇವೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read