ಬೀದರ್: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವಿಪಕ್ಷ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಬೀದರ್ ನ ಔರಾದ್ ನಲ್ಲಿ ನಡೆದ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಸರ್ಕಾರದಲ್ಲಿ ಹಣ ಕೊಟ್ಟರೆ ಮಾತ್ರ ಕೆಲಸ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದರು. ಕಾಂಗ್ರೆಸ್ ಸರ್ಕಾರದ ಅವಧಿಯ ಎಲ್ಲಾ ಹಗರಣಗಳ ಬಗ್ಗೆ ದಾಖಲೆ ಸಮೇತ ರಾಹುಲ್ ಗಾಂಧಿಗೆ ಕಳುಹಿಸುವುದಾಗಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರ್ಜಿ ಕರೆಯದೇಯೇ ಕೆಲಸ ಕೊಡಲಾಗುತ್ತಿತ್ತು. ಸಿದ್ದರಾಮಯ್ಯನವರ ಆಡಳಿತದಲ್ಲಿ ಏನೆಲ್ಲ ಭ್ರಷ್ಟಾಚಾರಗಳು ನಡೆದಿವೆ ಎಂಬ ಬಗ್ಗೆ ದಾಖಲೆಗಳ ಸಮೇತ ರಾಹುಲ್ ಗಾಂಧಿಯವರಿಗೆ ಕಳುಹಿಸಿ ಕೊಡುತ್ತೇನೆ ಎಂದು ಹೇಳಿದರು.