alex Certify BIG NEWS: ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಬಿಟ್ ಕಾಯಿನ್ ದಂಧೆ; ವಿಪಕ್ಷ ನಾಯಕನ ವಿರುದ್ಧ ಬಿಜೆಪಿ ಗಂಭೀರ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಬಿಟ್ ಕಾಯಿನ್ ದಂಧೆ; ವಿಪಕ್ಷ ನಾಯಕನ ವಿರುದ್ಧ ಬಿಜೆಪಿ ಗಂಭೀರ ಆರೋಪ

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಮುಂದುವರೆದಿದ್ದು, ಇದೀಗ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೇ ಬಿಟ್ ಕಾಯಿನ್ ದಂಧೆ ನಡೆದಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಬಿಟ್ ಕಾಯಿನ್ ದಂಧೆಯ ಆರೋಪಿ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮಹಮ್ಮದ್ ನಲಪಾಡ್ ಹಾಗೂ ಮಾಜಿ ಸಚಿವ ಲಮಾಣಿ ಪುತ್ರ ದರ್ಶನ್ ನಡುವೆ ಅವ್ಯವಹಾರ ನಡೆಸಿರುವ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ತಿಳಿಸಿದೆ.

ಬಿಟ್ ಕಾಯಿನ್ ದಂಧೆ ಆರೋಪಿ ಶ್ರೀಕಿಯನ್ನು ಸಿದ್ದರಾಮಯ್ಯ ಅವಧಿಯಲ್ಲಿ ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು. ಅದೇ ಸಿದ್ದರಾಮಯ್ಯ ಈಗ ಬಿಟ್ ಕಾಯಿನ್ ಆರೋಪಿಗೆ ಕಾಂಗ್ರೆಸ್ ನಾಯಕರ ಜೊತೆ ಇರುವ ಸಂಬಂಧವನ್ನು ಉಲ್ಲೇಖ ಮಾಡದೆ, ಬಿಜೆಪಿ ವಿರುದ್ಧ ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ ಎಂದು ಕಿಡಿಕಾರಿದೆ.

ಬಿಟ್ ಕಾಯಿನ್ ವಿಚಾರವಾಗಿ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಪ್ರಕರಣ ಸಂಬಂಧ ಸಾಕ್ಷ್ಯಗಳಿದ್ದರೆ ಬಹಿರಂಗಪಡಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...