ವಿಜಯಪುರ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆಯ ಕ್ಷೇತ್ರದ ಬಗ್ಗೆ ಮತ್ತೆ ಗೊಂದಲಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ವಿಜಯಪುರದ ನಾಲತವಾಡದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ಹಿರಿಯ ರಾಜಕಾರಣಿ, ಸ್ಪರ್ಧೆಯ ಕ್ಷೇತ್ರದ ಬಗ್ಗೆ ಅವರೇ ತೀರ್ಮಾನ ಮಾಡಬೇಕು. ಸ್ಪರ್ಧೆ ಮಾಡುವುದು ಅವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.