ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ಸ್ಥಳೀಯ ನಾಯಕರಿಂದ ಕೊನೇ ಕ್ಷಣದಲ್ಲಿ ಗೇಮ್ ಚೇಂಜ್ ಆಗಿದೆ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಅಪಮಾನ. ಬಿಜೆಪಿಯನ್ನು ಗೆಲ್ಲಿಸಲು ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಲೆಹರ್ ಸಿಂಗ್ ಬಿ ಎಸ್ ವೈ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಲೂ ಲೆಹರ್ ಸಿಂಗ್ ಸಹಾಯ ಮಾಡಿದ್ದರು ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕಾಂಗ್ರೆಸ್ ಸಹಾಯ ಮಾಡುತ್ತಿದೆ. ಬಿಜೆಪಿ ಹಾಗೂ ಸಿದ್ದರಾಮಯ್ಯ ನಡುವೆ ಒಳ ಒಪ್ಪಂದವಾಗಿರುವುದು ನಿಜ ಎಂದು ಇಬ್ರಾಹಿಂ ಹೇಳಿದ್ದಾರೆ.