ಬೆಂಗಳೂರು: ಗಾಂಧಿ ಮಗ ಕುಡುಕನಾದ..ಎಸ್ ಆರ್ ಬೊಮ್ಮಾಯಿ ಗುಣ ಮಗನಿಗೆ ಬರುತ್ತೆ ಎಂದು ಹೇಳಲಾಗದು ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, ಸಿದ್ದರಾಮಯ್ಯನವರೇ ನೀವು ಯಾವ ಗಾಂಧಿ ಬಗ್ಗೆ ಹೇಳಿದ್ದು? ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿ ಪುತ್ರನ ಬಗ್ಗೆಯೋ ಎಂದು ಪ್ರಶ್ನಿಸಿದೆ.
ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿಜೆಪಿ, ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ? ಎಂದು ಕೇಳಿದೆ.
‘ನಾಸಾ’ ಕಣ್ಣಲ್ಲಿ ಸೆರೆಯಾಯ್ತು ಟೋಕಿಯೋ ಒಲಿಂಪಿಕ್ನ ಅತ್ಯದ್ಭುತ ದೃಶ್ಯ….!
ಸಿದ್ದರಾಮಯ್ಯನವರೇ ಪ್ರಮಾಣಿಕವಾಗಿ ಹೇಳಿ ನಿಮ್ಮ ಪುತ್ರ, ಡಾ.ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ? ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ ಎಂದು ಬಿಜೆಪಿ ಚಾಟಿ ಬೀಸಿದೆ.