alex Certify BIG NEWS: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಖಡಕ್ ತಿರುಗೇಟು; ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಹೊರತು ಅಪ್ಪನಿಂದ ಬರುವುದಲ್ಲ; ವಿಪಕ್ಷ ನಾಯಕನಿಗೆ ಚಾಟಿ ಬೀಸಿದ ಕೇಸರಿ ಪಾಳಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಖಡಕ್ ತಿರುಗೇಟು; ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಹೊರತು ಅಪ್ಪನಿಂದ ಬರುವುದಲ್ಲ; ವಿಪಕ್ಷ ನಾಯಕನಿಗೆ ಚಾಟಿ ಬೀಸಿದ ಕೇಸರಿ ಪಾಳಯ

ಬೆಂಗಳೂರು: ಗಾಂಧಿ ಮಗ ಕುಡುಕನಾದ..ಎಸ್ ಆರ್ ಬೊಮ್ಮಾಯಿ ಗುಣ ಮಗನಿಗೆ ಬರುತ್ತೆ ಎಂದು ಹೇಳಲಾಗದು ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, ಸಿದ್ದರಾಮಯ್ಯನವರೇ ನೀವು ಯಾವ ಗಾಂಧಿ ಬಗ್ಗೆ ಹೇಳಿದ್ದು? ಇಂದಿರಾ ಗಾಂಧಿ ಪುತ್ರನ ಬಗ್ಗೆಯೋ ಅಥವಾ ಸೋನಿಯಾ ಗಾಂಧಿ ಪುತ್ರನ ಬಗ್ಗೆಯೋ ಎಂದು ಪ್ರಶ್ನಿಸಿದೆ.

ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿಜೆಪಿ, ನಿಮ್ಮ ಹಿರಿಯ ಪುತ್ರ ರಾಕೇಶ್ ವಿಪರೀತ ಕುಡಿಯುವ ಅಭ್ಯಾಸ ಹೊಂದಿದ್ದರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಕುಡಿದ ಮತ್ತಿನಲ್ಲಿ ಹಿರಿಯರ ಮೇಲೂ ದೌರ್ಜನ್ಯ ಎಸಗಿದ ಬಗ್ಗೆ ಸುದ್ದಿಯಾಗಿತ್ತು. ಇದೆಲ್ಲ ಅಪ್ಪನ ಗುಣ ಎಂದು ಸಾಮಾನ್ಯೀಕರಿಸಲು ಸಾಧ್ಯವೇ? ಎಂದು ಕೇಳಿದೆ.

‘ನಾಸಾ’ ಕಣ್ಣಲ್ಲಿ ಸೆರೆಯಾಯ್ತು ಟೋಕಿಯೋ ಒಲಿಂಪಿಕ್​​ನ ಅತ್ಯದ್ಭುತ ದೃಶ್ಯ….!

ಸಿದ್ದರಾಮಯ್ಯನವರೇ ಪ್ರಮಾಣಿಕವಾಗಿ ಹೇಳಿ ನಿಮ್ಮ ಪುತ್ರ, ಡಾ.ಯತೀಂದ್ರ ಅವರಿಗೆ ನಿಮ್ಮ ಗುಣ ಎಷ್ಟು ಬಂದಿದೆ? ಸಾಮಾನ್ಯವಾಗಿ ತಂದೆಯಿಂದ ಮಗನಿಗೆ ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ. ಸಂಸ್ಕಾರ, ಗುಣ, ಸಾಮರ್ಥ್ಯ ಅವರವರ ಗಳಿಕೆ ಎಂಬುದನ್ನು ಅರ್ಥೈಸಿಕೊಳ್ಳಿ ಎಂದು ಬಿಜೆಪಿ ಚಾಟಿ ಬೀಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...