BIG NEWS: ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸವನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದು, ಪ್ರಧಾನಿ ಮೋದಿ ಭೇಟಿಯಿಂದಾಗಿ ಕಾಂಗ್ರೆಸ್ ನಾಯಕರಿಗೆ ನಿರಾಸೆಯಾಗಿದೆ ಎಂದು ಟೀಕಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ ಆಗಮನದಿಂದಾಗಿ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಬಿಜೆಪಿಗೆ ಸಿಗುತ್ತಿರುವ ಜನ ಬೆಂಬಲದಿಂದ ವಿಚಲಿತಗೊಂಡಿದ್ದಾರೆ ಎಂದರು.

ಅಮಿತ್ ಶಾ ಚುನಾವಣಾ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಆಗಿ ಈ ರೀತಿ ಮಾತನಾಡುವುದು ಸರಿಯಲ್ಲ. ಹಾಗಾದ್ರೆ ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟಾ? ಎಂದು ಗುಡುಗಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read