
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿ ತಾರಕಕ್ಕೇರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ‘ಸಿದ್ದು ನಿಜ ಕನಸುಗಳು’ ಎಂಬ ಪುಸ್ತಕ ಬಿಡುಗಡೆ ಮಾಡಲು ಹೊರಟಿದೆ. ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ನಾಯಕರಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ಖಡ್ಗ ಹಿಡಿದುಕೊಂಡು ಡ್ರೆಸ್ ಹಾಕಿದ್ದವರು ಯಾರು? ನನ್ನ ತೇಜೋವಧೆ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.
ಈ ನಡುವೆ ಸಿದ್ದು ನಿಜ ಕನಸುಗಳ ಪುಸ್ತಕ ಬಿಡುಗಡೆಗೆ ಬಿಜೆಪಿ ಸಜ್ಜಾಗುತ್ತಿದ್ದಂತೆ ಪುಸ್ತಕ ಬಿಡುಗಡೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಹಾಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.