ಬೆಂಗಳೂರು: ತಮ್ಮ ವಿರುದ್ಧದ ಸಿಬಿಐ ತನಿಖೆ ಅನುಮತಿ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 26ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಡಿ.ಕೆ.ಶಿ. ಪರ ವಕೀಲ ಉದಯ್ ಹೊಳ್ಳ, ಸಿಬಿಐ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಮನವಿ ಮಾಡಿದರು. ಇದಕ್ಕೆ ಸಿಬಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈಗಾಗಲೇ ಬಲವಂತದ ಕ್ರಮ ತೆಗೆದುಕೊಳ್ಳದಂತೆ ತಡೆ ಇದೆ. ಈಗ ನೋಟೀಸ್ ಗೂ ತಡೆ ನೀಡಿದರೆ ವಿಚಾರಣೆಗೆ ಸಮಸ್ಯೆಯಾಗಲಿದೆ ಸಿಬಿಐ ತನಿಖೆಗೆ ತಡೆಯಾಜ್ನೆ ನೀಡಿದಂತಾಗುತ್ತದೆ. ಭ್ರಷ್ಟಾಚಾರ ತಡೆ ಕಾಯ್ದೆಗೆ ವಿರುದ್ಧವಾದ ಆದೇಶ ನೀಡಬಾರದು ಎಂದು ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ.
ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದೆ.