ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗಲಿರುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ.
ಇಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇಬ್ರಾಹಿಂ ಜೆಡಿಎಸ್ ಸೇರ್ಪಡೆ ಕುರಿತು ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಡಿಸೆಂಬರ್ ನಲ್ಲಿ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.
ಗರ್ಭಿಣಿಯಾಗುವ ಚಟಕ್ಕೆ ಬಿದ್ದ ಮಹಿಳೆ…! 8 ಮಕ್ಕಳಿರುವ ಈಕೆಗೆ ಬೇಕಂತೆ ಮತ್ತಷ್ಟು ಮಕ್ಕಳು
2023 ರ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಮುಸ್ಲಿಂ ಸಮುದಾಯದ ಓಲೈಕೆಗೆ ಮುಂದಾಗಿದ್ದು, ಇದೀಗ ಕುಮಾರಸ್ವಾಮಿ ಹಾಗೂ ಸಿ.ಎಂ. ಇಬ್ರಾಹಿಂ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.