ಹಾನಗಲ್: ಉಪಚುನಾವಣಾ ಪ್ರಚಾರ ಭರಾಟೆ ಜೋರಾಗಿದ್ದು, ರಾಜಕೀಯ ಪಕ್ಷಗಳ ನಾಯಕರು ಒಬ್ಬರಿಗೊಬ್ಬರು ಕಾಲೆಳೆದುಕೊಳ್ಳುತ್ತಾ ವಾಗ್ದಾಳಿ ಮುಂದುವರೆಸಿದ್ದಾರೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡುವ ನಿಟ್ಟಿನಲ್ಲಿ ಸಚಿವರಾದ ಬಿ.ಸಿ.ಪಾಟೀಲ್ ಹಾಗೂ ಎಸ್.ಟಿ.ಸೋಮಶೇಖರ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಹಾನಗಲ್ ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಿ.ಎಂ.ಉದಾಸಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕೊರಗಿತ್ತು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಸಿ.ಎಂ.ಉದಾಸಿಯವರು ಡಿ.ಕೆ.ಶಿಗೆ ವಿಲ್ ಬರೆದು ಕೊಟ್ಟಿದ್ದರೇ? ಸಚಿವ ಸ್ಥಾನ ಸಿಗದಿದ್ದಕ್ಕೇ ನಿಧನನಾದೆ ಎಂದು ಬರೆದುಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಸ್ನೇಹಕ್ಕೆ ಅಡ್ಡಿ ತಂದಿತಾ ಕೋಮು ಘರ್ಷಣೆ….? ಗೆಳೆಯರಿಂದಲೇ ನಡೀತು ಯುವಕನ ಬರ್ಬರ ಕೊಲೆ….!
ಇದೇ ವೇಳೆ ಮಾತನಾಡಿದ ಸಚಿವ ಸೋಮಶೇಖರ್, ಬಿಜೆಪಿ ಹಾಗೂ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಪದೇ ಪದೇ ಆರೋಪ ಮಾಡುತ್ತಿರುವ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿ, ಸಿದ್ದರಾಮಯ್ಯನವರಿಗೇನು ಗೊತ್ತು ರಾಜಕಾರಣ? ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಹೊಟೇಲ್ ಗೆ ಹೋದವರು ಬರಿಗೈನಲ್ಲಿ ಬರಬೇಡಿ, ಅಲ್ಲಿ ಸಿಗಲಿದೆ ಉಚಿತ ವಸ್ತು
ಯಡಿಯೂರಪ್ಪ ಯಾರ ಒತ್ತಡದಿಂದಲೂ ರಾಜೀನಾಮೆ ನೀಡಿಲ್ಲ. ಸಿದ್ದರಾಮಯ್ಯ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಸ್ವತಃ ಯಡಿಯೂರಪ್ಪನವರೇ ಹೇಳಿದ್ದಾರೆ ತಾನು ಯಾರ ಒತ್ತಡದಿಂದಾಗಲಿ, ಬಲವಂತದಿಂದಾಗಲಿ ರಾಜೀನಾಮೆ ನೀಡಿಲ್ಲ. ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಒಂದು ವೇಳೆ ಒತ್ತಡದಿಂದ ಕೊಟ್ಟಿದ್ದಾರೆ ಎನ್ನುವುದಾದರೆ ನಮಗೆ ಗೊತ್ತಾಗುತ್ತಿರಲಿಲ್ಲವೇ? ಎಂದು ಕೇಳಿದ್ದಾರೆ.
ಬಿ.ಎಸ್.ವೈ. ಜೈಲಿಗೆ ಹೋಗಿ ಬಂದಿದ್ದಾರೆ, ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇವರದೇ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗಿ ಬಂದಿದ್ದನ್ನು ಯಾಕೆ ಸಿದ್ದರಾಮಯ್ಯ ಪ್ರಸ್ತಾಪಿಸುತ್ತಿಲ್ಲ? ಅವರ ಭ್ರಷ್ಟಾಚಾರದ ಬಗ್ಗೆ ಸ್ವಪಕ್ಷದ ನಾಯಕರೇ ಹೇಳುತ್ತಿದ್ದಾರೆ. ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಉಪಚುನಾವಣೆಯಲ್ಲಿ ಸೋಲುವ ಭೀತಿ ಎದುರಾಗಿದೆ ಹೀಗಾಗಿ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.