ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ’ಕಚ್ಚೆ ಹರುಕ’ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಕಿಸಾನ್ ಘಟಕ, ಮೊದಲು ಸಿ.ಟಿ.ರವಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.
ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ, ಬಿಜೆಪಿ ಮುಖಂಡ ಸಿ.ಟಿ.ರವಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಕ್ಷಣ ಸಿ.ಟಿ.ರವಿ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಒಂದು ವೇಳೆ ಸಿ.ಟಿ.ರವಿ ಕ್ಷಮೆಯಾಚಿಸದಿದ್ದರೆ ಸಿ.ಟಿ.ರವಿಯವರಿಗೆ ಹರುಕು ಕಚ್ಚೆ ಕಳುಹಿಸಲಾಗುವುದು. ರಾಜ್ಯಾದ್ಯಂತ ಕಾಂಗ್ರೆಸ್ ಕಿಸಾನ್ ಘಟಕ ಬಿಜೆಪಿ ನಾಯಕನ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.