ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಸಿ.ಟಿ.ರವಿ ಅವರ ಬಸವನಹಳ್ಳಿಯಲ್ಲಿರುವ ನಿವಾಸಕ್ಕೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿಯಾಗಿದ್ದು, ಬನ್ನಿ ನೋಡೋಣ ಎಂದು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರಿಗೆ ಸವಾಲು ಹಾಕಿದ್ದಾರೆ. ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಮಾರ್ಗಮಧ್ಯೆಯೇ ತಡೆದಿದ್ದಾರೆ.