ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೊದಲು ಸಿ.ಟಿ.ರವಿ ವಿರುದ್ಧ ಕೇಸ್ ದಾಖಲಿಸಲಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ,ಶಿವಕುಮಾರ್, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ? ರಾಜ್ಯದಲ್ಲಿ ಅಶಾಂತಿ ಮೂಡಿಸಲು ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿ ನಾಯಕರು ಹಳ್ಳಿಗಳಲ್ಲಿ ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು. ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.