ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಚಿಕ್ಕಮಗಳೂರಿನ ನಿಡಘಟ್ಟದಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನಿಂದ ಸಿ.ಟಿ. ರವಿ ಅವರನ್ನು ಗೆಲ್ಲಿಸಿ. ಅವರು ಮುಂದಿನ ಸಿಎಂ ಆಗಬೇಕು ಎಂದು ಹೇಳಿದರು.
ನಿನ್ನೆಯಷ್ಟೇ ಸಿ.ಟಿ. ರವಿ ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯಿದೆ. ಆದರೆ ಈ ಕೂಗು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತ್ರವಿದೆ ರಾಜ್ಯಾದ್ಯಂತ ಕಾರ್ಯಕರ್ತರಲ್ಲಿ ಆ ಕೂಗು ಕೇಳಿಬಂದಾಗ ನನ್ನನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಕೇಳುತ್ತೇನೆ ಎಂದು ಹೇಳಿದ್ದರು.
ಇದರ ಬೆನ್ನಲ್ಲೇ ಇದೀಗ ಈಶ್ವರಪ್ಪ ಕೂಡ ಸಿ.ಟಿ. ರವಿ ಮುಂದಿನ ಸಿಎಂ ಆಗಬೇಕು ಎಂದು ಹೇಳಿದ್ದು ಕುತೂಹಲಕ್ಕೆ ಕಾರಣವಾಗಿದೆ.