alex Certify BIG NEWS: ಸಿ.ಟಿ. ರವಿ ಹೇಳಿಕೆ ವೈರಲ್; ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿ.ಟಿ. ರವಿ ಹೇಳಿಕೆ ವೈರಲ್; ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಚಿಕ್ಕಮಗಳೂರು: ವೀರಶೈವ ಲಿಂಗಾಯಿತರಿಗೆ ಪ್ರಮುಖ್ಯತೆ ನೀಡಬೇಕಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮೂವರು ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸಿ.ಟಿ. ರವಿ ಹೇಳಿದ್ದಾರೆ ಎನ್ನಲಾದ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಮೂಲದ ಹರೀಶ್, ಗುರುಪಾಟೀಲ್ ಹಾಗೂ ತುಮಕೂರು ಮೂಲದ ಸುವರ್ಣಗಿರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮೂವರೂ ಕಾಂಗ್ರೆಸ್ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೂವರ ವಿರುದ್ಧ ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...