ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ ನಡೆಸಿದ್ದಾರೆ.
ಚನ್ನಪಟ್ಟಣದ ಬೈರಾಪಟ್ಟಣದಲ್ಲಿ ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಕಾರಿನ ಮೇಲೆ ಮೊಟ್ಟೆ ಕಲ್ಲು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಮಾಜಿ ಸಿಎಂ ಸ್ವಕ್ಷೇತ್ರ ಚೆನ್ನಪಟ್ಟಣದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರನ್ನು ದೂರವಿಟ್ಟು ಸಿ.ಪಿ. ಯೋಗೇಶ್ವರ್ ಸರ್ಕಾರದ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಜೆಡಿಎಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.