ಭಾನುವಾರದಂದು ಮುಂಬೈ – ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದರು. ಅಹಮದಾಬಾದ್ ನಿಂದ ತಮ್ಮ ಸ್ನೇಹಿತರೊಂದಿಗೆ ಮುಂಬೈಗೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿತ್ತು.
ಅಪಘಾತದಲ್ಲಿ ಮೃತಪಟ್ಟ ಸೈರಸ್ ಮಿಸ್ತ್ರಿ ಹಾಗೂ ಅವರ ಸ್ನೇಹಿತ ಸೀಟ್ ಬೆಲ್ಟ್ ಧರಿಸದೆ ಇದ್ದ ಕಾರಣ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದ್ದವು. ಈ ಹಿನ್ನೆಲೆಯಲ್ಲಿ ಸೀಟ್ ಬೆಲ್ಟ್ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.
ಹೀಗಾಗಿ ಸೀಟ್ ಬೆಲ್ಟ್ ಧರಿಸದೆ ಇದ್ದ ಸಂದರ್ಭದಲ್ಲಿ ಬೀಪ್ ಶಬ್ದ ಬರದಂತೆ ತಡೆಯಲು ಇರುವ ಉಪಕರಣವನ್ನು ಮಾರಾಟ ಮಾಡುತ್ತಿದ್ದ ಅಮೆಜಾನ್ ಕಂಪನಿಗೆ ಕೇಂದ್ರ ಸರ್ಕಾರ ಈಗ ನಿರ್ದೇಶನ ನೀಡಿದ್ದು, ಇನ್ನು ಮುಂದೆ ಇದನ್ನು ಮಾರಾಟ ಮಾಡದಂತೆ ಸೂಚಿಸಿದೆ.