ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ಬಗ್ಗೆ ಎಸ್ಐಟಿ ನೀಡಿರುವ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ನೀಡಿದ ಅನುಮತಿ ಆದೇಶ ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಪ್ರೀಂ ಕೋರ್ಟ್, ಅರ್ಜಿ ವಿಚಾರಣೆಯನ್ನು ಫೆ.14 ರ ಸೋಮವಾರದಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
ಕೊರೊನಾ ಆತಂಕದ ಮಧ್ಯೆ ಮತ್ತೊಂದು ಭೀತಿ…! ಬ್ರಿಟನ್ ಕುಟುಂಬವನ್ನು ಕಾಡುತ್ತಿದೆ ಮಾರಣಾಂತಿಕ ಲಸ್ಸಾ ಜ್ವರ
ಆರೋಪಿ ರಮೇಶ್ ಜಾರಕಿಹೊಳಿ ಕೋರಿಕೆ ಮೇರೆಗೆ ಎಸ್ಐಟಿ ರಚಿಸಿರುವುದು ಅಸಿಂಧು, ಇಂತಹ ಎಸ್ಐಟಿ ನಡೆಸಿದ ತನಿಖಾ ವರದಿಗೆ ಎಸ್ಐಟಿ ಮುಖ್ಯಸ್ಥ ಸೌಮೇಂದು ಮುರ್ಖರ್ಜಿ ಸಹಿ ಹಾಕಿರಲಿಲ್ಲ. ಈ ಬಗ್ಗೆ ಹೈಕೋರ್ಟ್ ಕೇಳಿದಾಗ ಆರಂಭದಲ್ಲಿ ತನಗೂ ತನಿಖಾ ವರದಿಗೂ ಸಂಬಂಧವಿಲ್ಲ ಎಂದಿದ್ದ ಮುಖರ್ಜಿ ಆ ನಂತರ ವರದಿ ಅನುಮೋದಿಸಿದ್ದು ಅನುಮಾನವಾಗಿದೆ. ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಕೂಡ ಬಾಕಿ ಇದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಒಟ್ಟಾರೆ ಎಸ್ಐಟಿ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ನೀಡಿರುವ ಮಧ್ಯತರ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಸಂತ್ರಸ್ತ ಯುವತಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.