ಮೈಸೂರು: ಸಂಸದೆ ಸುಮಲತಾ ಹಾಗೂ ಜೆಡಿಎಸ್ ಶಾಸಕರ ವಾಕ್ಸಮರ ತಾರಕಕ್ಕೇರಿದ್ದು, ಇದೀಗ ಶಾಸಕ ರವೀಂದ್ರ ಶ್ರೀಕಂಠಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಸುಮಲತಾ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಡಿಯೋ ಬಾಂಬ್ ಸಿಡಿಸಿದ ಬೆನ್ನಲ್ಲೇ ಇದೀಗ ಶಾಸಕರು ದಾಖಲೆ ಬಾಂಬ್ ಸಿಡಿಸಿದ್ದಾರೆ. ಸುಮಲತಾ ಅವರು ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ನಾವೂ ಮಾತನಾಡಬೇಕಾಗುತ್ತದೆ. ನಮ್ಮ ಬಳಿಯೂ ಸಾಕಷ್ಟು ದಾಖಲೆಗಳಿವೆ ಎಂದು ಹೇಳಿದ್ದಾರೆ.
BIG NEWS: ಮಾಜಿ ಸಿಎಂ ಹೆಚ್.ಡಿ.ಕೆ.ಪರ ಸಂಸದ ಪ್ರತಾಪ್ ಸಿಂಹ ಬ್ಯಾಟಿಂಗ್
ನಿಮ್ಮ ಬಳಿ ಇದ್ದವರನ್ನು ಯಾವ ಹೋಟೆಲ್ ಗೆ ಕಳುಹಿಸಿದಿರಿ. ಯಾಕೆ ಕಳುಹಿಸಿದ್ರಿ? ನಿಮ್ಮ ಬ್ರೋಕರ್ ಗಳು ಯಾರ ಜೊತೆ ಮಾತನಾಡಿದ್ರು? ಎಲ್ಲವೂ ಗೊತ್ತಿದೆ ಎಲ್ಲದರ ಬಗ್ಗೆ ನನ್ನ ಬಳಿ ದಾಖಲೆಯಿದೆ. ಮಂಡ್ಯ ಜಿಲ್ಲೆಯ ಜನರ ಸಮಸ್ಯೆಗಳನ್ನು ಬಗೆಹರಿಸುವುದನ್ನು ಬಿಟ್ಟು ಅನಗತ್ಯ ಹೇಳಿಕೆಗಳನ್ನು ನೀಡುತ್ತಾ ರಾಜಕಾರಣ ಮಾಡುವುದಾದರೆ ಮುಂದಿನ ದಿನಗಳಲ್ಲಿ ದಾಖಲೆಗಳ ಸಮೇತ ನಿಮ್ಮ ವ್ಯವಹಾರಗಳ ಬಗ್ಗೆಯೂ ಮಾತನಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.