alex Certify BIG NEWS: ಸುಮ್ಮನೆ ಕುಳಿತುಕೋ; ಜಮೀರ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುಮ್ಮನೆ ಕುಳಿತುಕೋ; ಜಮೀರ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ

ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್, ಬಿಟ್ ಕಾಯಿನ್ ದಂಧೆ ಕುರಿತು ದಾಖಲೆಯಿದ್ದರೆ ಬಹಿರಂಗಪಡಿಸಲಿ; ಸಚಿವ ಈಶ್ವರಪ್ಪ ಸವಾಲ್ | Karnataka Crypto Scam KS Eshwarappa and Other BJP Leaders Hits ...

ಬೆಂಗಳೂರು: ಆರ್ ಎಸ್ ಎಸ್ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಜಮೀರ್ ಅಹ್ಮದ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಆರ್ ಎಸ್ ಎಸ್ ಎಂದು ಸ್ಪೀಕರ್ ಕಾಗೇರಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಜಮೀರ್ ಅಹ್ಮದ್, ಸಭಾಧ್ಯಕ್ಷರ ಪೀಠದಲ್ಲಿ ಕುಳಿತು ನಮ್ಮ ಆರ್ ಎಸ್ ಎಸ್ ಎಂದು ಹೇಳುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಮಧ್ಯಪ್ರವೇಶಿಸಿದ ಸಚಿವ ಈಶ್ವರಪ್ಪ, ರಾಜ್ಯಕ್ಕೆ ನೀನು ಬೆಂಕಿ ಹಚ್ಚಿದವನು. ನೀನು ಮಾತನಾಡದೇ ಸುಮ್ಮನೆ ಕುಳಿತುಕೋ ಎಂದು ಗುಡುಗಿದ್ದಾರೆ.

ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್​ ಬಳಿಕ ಖಾಕಿ ಅಲರ್ಟ್​

ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿಯಿದ್ದರೂ ಮೆರವಣಿಗೆ ನಡೆಸಿ, ಹಿಂಸಾಚಾರಕ್ಕೆ ಕಾರಣಾದವರು ನೀವು. ಸಚಿವರಾಗಿ ಮಾತನಾಡುವ ಹಕ್ಕು ನಿಮಗಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಇನ್ನಷ್ಟು ಕೆಂಡವಾದ ಸಚಿವ ಈಶ್ವರಪ್ಪ, ಕಾಂಗ್ರೆಸ್ ಗೆ ಮಾತ್ರ ಅಲ್ಲ ಇಡೀ ರಾಜ್ಯಕ್ಕೆ ಬೆಂಕಿ ಹಚ್ಚಿದವನು ನೀನು. ನೀನು ಮತನಾಡದೇ ಸುಮ್ಮನೇ ಕುಳಿತುಕೊಳ್ಳಲೇ ಎಂದು ವಾಗ್ದಾಳಿ ನಡೆಸಿದ್ದಾರೆ. ಸಚಿವ ಈಶ್ವರಪ್ಪ ಹೇಳಿಕೆಗೆ ಸದನದಲ್ಲಿ ಗದ್ದಲ-ಕೋಲಾಹಲ ಆರಂಭವಾಯಿತು.

ಈ ವೇಳೆ ಮಾತನಾಡಿದ ಸ್ಪೀಕರ್ ಕಾಗೇರಿ, ಸಮಾಜದಲ್ಲಿ ಸ್ವಾಸ್ಥ್ಯ ಕದಡುವ ಯಾವುದೇ ಪದಬಳಕೆಯನ್ನು ಕಡತದಲ್ಲಿ ಉಳಿಸುವುದಿಲ್ಲ ಎಂದು ಹೇಳುತ್ತಿದ್ದಂತೆ ಪರಿಸ್ಥಿತಿ ಶಾಂತವಾದ ಪ್ರಸಂಗ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...