ಮಂಗಳೂರು: ಮಂಗಳೂರು ಬಳಿಯ ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ಟೋಲ್ ಗೇಟ್ ಕಿತ್ತುಹಾಕಲು ಸಾರ್ವಜನಿಕರು ಕರೆ ನೀಡಿರುವ ಹಿನ್ನೆಲೆಯಲ್ಲಿ ಟೋಲ್ ಗೇಟ್ ಗೆ ನುಗ್ಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೂರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಇಂದು ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ನಿನ್ನೆ ಹೇಳಿಕೆ ನೀಡಿದ್ದ ಹೋರಾಟಗಾಗರರು ಇಂದು ಟೋಲ್ ಗೇಟ್ ಬಳಿ ಪ್ರತಿಭಟನೆ ತೀವ್ರಗೊಳಿಸಿದ್ದು, ಸಾವಿರಾರು ಜನರು ಟೋಲ್ ಗೇಟ್ ಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಹೋರಾಟಗಾರರು ಹಾಗೂ ಪೊಲಿಸರ ನಡುವೆ ವಾಗ್ವಾದ ಸಂಘರ್ಷ ಏರ್ಪಟ್ಟಿದೆ. ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಬಂದ್ ಆಗಿದೆ.
ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಫ್ಲಾಜಾಗೆ ನುಗ್ಗಿದ್ದಾರೆ. ಈ ವೇಳೆ ಪೊಲಿಸರು ಮಹಿಳೆಯರು, ಪುರುಷರು ಸೇರಿದಂತೆ ಹಲವು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.