ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನೂತನ ಸಿಎಂ ಆಯ್ಕೆ ಕಸರತ್ತು ಮುಂದುವರೆದಿದ್ದು, ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಮೊದಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುತ್ತೇನೆ. ಬಳಿಕ ಕಾಂಗ್ರೆಸ್ ನ ಎಲ್ಲಾ ನಾಯಕರನ್ನು ಭೇಟಿಯಾಗುವುದಾಗಿ ತಿಳಿಸಿದರು.
ಕಾಂಗ್ರೆಸ್ ಪಕ್ಷ ನನಗೆ ತಾಯಿ ಇದ್ದಂತೆ. ಕಾಂಗ್ರೆಸ್ ಹೈಕಮಾಂಡ್ ಇದೆ, 135 ಶಾಸಕರು ಇದ್ದಾರೆ. ಸಿಎಂ ಸ್ಥಾನ ನೀಡದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂಬುದು ಶುದ್ಧ ಸುಳ್ಳು. ಸುಳ್ಳು ಸುದ್ದಿ ಹರಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.