alex Certify BIG NEWS: ಸೆಪ್ಟೆಂಬರ್ 16 ರ ‘ರಾಷ್ಟ್ರೀಯ ಸಿನಿಮಾ ದಿನ’ದಂದು ಟಿಕೆಟ್ ದರ ಕೇವಲ 75 ರೂ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೆಪ್ಟೆಂಬರ್ 16 ರ ‘ರಾಷ್ಟ್ರೀಯ ಸಿನಿಮಾ ದಿನ’ದಂದು ಟಿಕೆಟ್ ದರ ಕೇವಲ 75 ರೂ.

ಸೆಪ್ಟೆಂಬರ್ 16ರಂದು ರಾಷ್ಟ್ರೀಯ ಸಿನೆಮಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ವರ್ಷ ಪೂರ್ತಿ ಸಿನಿಮಾ ರಂಗವನ್ನು ಸಕ್ರಿಯವಾಗಿ ಇಟ್ಟಿರುವ ಸಿನಿಪ್ರಿಯರಿಗೆ ಗೌರವ ಸಲ್ಲಿಸುವ ಸಲುವಾಗಿ ವಿಶೇಷ ಆಫರ್ ನೀಡಲಾಗುತ್ತಿದೆ.

ಅಂದು ದೇಶದ ಎಲ್ಲಾ ಸಿನಿಮಾ ಮಂದಿರಗಳಲ್ಲಿ ಯಾವುದೇ ಸಿನಿಮಾದ ಟಿಕೆಟ್ ಅನ್ನು ಕೇವಲ 75 ರೂಪಾಯಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಆದರೆ ಈ ಕುರಿತು ಅಧಿಕೃತವಾಗಿ ಘೋಷಣೆ ಹೊರ ಬೀಳಬೇಕಾಗಿದೆ.

ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದ್ದು, ಪಿವಿಆರ್, ಐನಾಕ್ಸ್, ಸಿನಿಪೊಲಿಸ್ ಸೇರಿದಂತೆ ಎಲ್ಲ ಮಲ್ಟಿಪ್ಲೆಕ್ಸ್ ಗಳಲ್ಲೂ ಈ ಆಫರ್ ಲಭ್ಯವಿರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...