ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಜಿಮ್ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಅಬ್ಬಿಗೆರೆಯಲ್ಲಿ ನಡೆದಿದೆ.
31 ವರ್ಷದ ಮನೋಹರ್ ಆತ್ಮಹತ್ಯೆಗೆ ಶರಣಾದ ಜಿಮ್ ಮಾಲೀಕ. ಕಮ್ಮಗೊಂಡನಹಳ್ಳಿ ಮುಖ್ಯ ರಸ್ತೆಯಲ್ಲಿ ಜಿಮ್ ನಡೆಸುತ್ತಿದ್ದ ಮನೋಹರ್ ಕೋವಿಡ್ ಸಂದರ್ಭದಿಂದಲೂ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು.
ಹರೀಶ್, ಮಂಜುನಾಥ್, ರಾಜು ಎಂಬುವವರ ಬಳಿ ಸಾಲ ಮಾಡಿದ್ದರು. ಕೋವಿಡ್ ನಿಂದ ಇದೀಗ ಎಲ್ಲಾ ಕ್ಷೇತ್ರಗಳು ಸ್ವಲ್ಪ ಮಟ್ಟಿಗೆ ಸುಧಾರಿಸಿಕೊಳ್ಳುತ್ತಿರುವುದರಿಂದ ಸಾಲ ತೀರಿಸುವಂತೆ ಸಾಲಗಾರರು ಒತ್ತಡ ಹೇರುತ್ತಿದ್ದರು. ಜಿಮ್, ಮನೆ ಬಳಿ ಹೋಗಿ ಪದೇ ಪದೇ ಗಲಾಟೆ ಮಾಡಿದ್ದರು.
ಇದರಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟು ಬಳಿಕ ಸೆಲ್ಫಿ ವಿಡಿಯೋ ಮಾಡಿ ಮನೋಹರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಗಮ್ಮನ ಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.