ಸೇವಾ ವಿಲೀನಕ್ಕೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮಾರ್ಚ್ 20 ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಆರಂಭಿಸಲಿದ್ದಾರೆ.
ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸಹ ಅತಿಥಿ ಉಪನ್ಯಾಸಕರ ಸೇವಾ ವಿಲೀನಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಕರ್ನಾಟಕ ನಾಗರೀಕ ಸೇವಾ ನೇಮಕಾತಿ ಅಧಿನಿಯಮ 1977ರ ನಿಯಮ 14 ರಡಿ ಸೇವೆ ಕಾಯಂ ಮಾಡುವ ಅವಕಾಶವಿದ್ದರೂ ಸಹ ಇದನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.
ಅಲ್ಲದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇತ್ತೀಚೆಗೆ ಮಂಡಿಸಿದ ಬಜೆಟ್ ನಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಬಹುದು ಎಂಬ ನಿರೀಕ್ಷೆಯಿದ್ದು, ಅದು ಹುಸಿಯಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 20 ರಿಂದ ಅನಿರ್ದಿಷ್ಟಾವಧಿ ಧರಣಿ ಕೈಗೊಳ್ಳಲು ತೀರ್ಮಾನಿಸಲಾಗಿದೆ.